ಗಂಗೊಳ್ಳಿಯಲ್ಲಿ ಮುದ್ದುಕೃಷ್ಣ ಸ್ಪರ್ಧೆ

ಗಂಗೊಳ್ಳಿ: ಉಡುಪಿಯ ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಕಾಣಿಯೂರು ಮಠದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಕೃಷ್ಣ ಸ್ಪರ್ಧೆಯು ಇತ್ತೀಚಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಾಲೆಯ ಆಡಳಿತ ಮಂಡಳಿ ಸದಸ್ಯ ಜಿ.ವೆಂಕಟೇಶ ನಾಯಕ್, ಶಿಕ್ಷಕ-ರಕ್ಷಕ ಸಮಿತಿಯ ಕಾರ್ಯದರ್ಶಿ ಬಿ.ಪ್ರಕಾಶ ಶೆಣೈ, ಶಾಲೆಯ ಮುಖ್ಯೋಪಾಧ್ಯಾಯಿನಿ ಸುಮನಾ ಪಡಿಯಾರ್, ತೀರ್ಪುಗಾರರುಮೊದಲಾದವರು ಉಪಸ್ಥಿತರಿದ್ದರು. 


ಜಿಎಸ್‌ಬಿ ಮಹಿಳಾ ಮಂಡಳಿ: ಚೂಡಿ ಪೂಜೆ
ಗಂಗೊಳ್ಳಿಯ ಜಿಎಸ್‌ಬಿ ಮಹಿಳಾ ಮಂಡಳಿ ವತಿಯಿಂದ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರಾವಣ ಮಾಸದ ಸಾಮೂಹಿಕ ಚೂಡಿ ಪೂಜೆ ಕಾರ್ಯಕ್ರಮ ಇಂದು ನಡೆಯಿತು.

ಜಿಎಸ್‌ಬಿ ಸಮಾಜದ ನೂರಾರು ಸಮಂಗಲಿಯರು ಸಾಮೂಹಿಕ ಚೂಡಿ ಪೂಜೆಯಲ್ಲಿ ಪಾಲ್ಗೊಂಡು ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸಿದರು. ಜಿಎಸ್‌ಬಿ ಮಹಿಳಾ ಮಂಡಳಿಯ ಪದಾಧಿಕಾರಿಗಳು, ದೇವಳದ ಆಡಳಿತ ಮಂಡಳಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com