ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ


ಕುಂದಾಪುರ: ಕ್ರೀಡಾಪಟುಗಳು ಕ್ರೀಡಾಸ್ಫೂರ್ತಿಯಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾಕೂಟಗಳ ಯಶಸ್ಸಿಗೆ ಸಹಕರಿಸಬೇಕು. ಎಲ್ಲ ತಂಡಗಳು ಪ್ರಶಸ್ತಿ ಪಡೆಯುವುದು ಅಸಾಧ್ಯವಾಗಿದ್ದು, ಸೋತಾಗ ಮಾತ್ರ ಮುಂದಿನ ಪಂದ್ಯದಲ್ಲಿ ಗೆಲ್ಲಬೇಕೆಂಬ ಸ್ಫೂರ್ತಿ ನಮ್ಮಲ್ಲಿ ಉಂಟಾಗುತ್ತದೆ. 40 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ನಿರಂತರವಾಗಿ ಕ್ರೀಡಾಕೂಟಗಳನ್ನು, ಪಂದ್ಯಾಟಗಳನ್ನು ನಡೆಸಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಗಂಗೊಳ್ಳಿಯ ಉದ್ಯಮಿ ಎಚ್.ಗಣೇಶ ಕಾಮತ್ ಹೇಳಿದರು.

ಅವರು  ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ಶ್ರೀ ರಾಘವೇಂದ್ರ ಸ್ಪೋಟ್ಸ್ ಕ್ಲಬ್ ಗಂಗೊಳ್ಳಿ ಮತ್ತು ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ರಾಘವೇಂದ್ರ ಸ್ಪೋಟ್ಸ್ ಕ್ಲಬ್‌ನ ೪೦ರ ಸಂಭ್ರಮಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಪುರುಷರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಉದ್ಯಮಿ ಜಿ.ವೆಂಕಟೇಶ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ, ಮಾಜಿ ಶಾಸಕ ಕೆ.ರಘುಪತಿ ಭಟ್ ಶುಭಾಶಂಸನೆಗೈದರು. 
ಸಂಘದ ಅಧ್ಯಕ್ಷ ಎಂ.ಜಿ.ರಾಘವೇಂದ್ರ ಭಂಡಾರ್‌ಕಾರ್ ಸ್ವಾಗತಿಸಿದರು. ಮಾಜಿ ಅಧ್ಯಕ್ಷ ಬಿ.ರಾಘವೇಂದ್ರ ಪೈ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ರಾಮನಾಥ ಚಿತ್ತಾಲ್ ವಂದಿಸಿದರು. ರಾಜ್ಯದ ಸುಮಾರು ೩೦ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿವೆ.
ಪಂದ್ಯಾಟದಲ್ಲಿ ಮಾಜಿ ಶಾಸಕ ರಘುಪತಿ ಭಟ್ ಭಾಗಿ
 ರಾಜ್ಯ ಮಟ್ಟದ ಪುರುಷರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ, ಮಾಜಿ ಶಾಸಕ ಕೆ.ರಘುಪತಿ ಭಟ್ ಭೇಟಿ ನೀಡಿ ಆಟಗಾರರನ್ನು ಅಭಿನಂದಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗಂಗೊಳ್ಳಿಯಲ್ಲಿ ಅನೇಕ ಯುವ ಪ್ರತಿಭಾನ್ವಿತ ಆಟಗಾರರಿದ್ದು, ಪ್ರತಿವರ್ಷ ರಜಾ ದಿನಗಳಲ್ಲಿ ಇಂತಹ ಪ್ರತಿಭಾನ್ವಿತ ಆಟಗಾರರಿಗೆ ಉಡುಪಿಯಲ್ಲಿ ವಸತಿ ಸಹಿತ ಬ್ಯಾಡ್ಮಿಂಟನ್ ತರಬೇತಿ ನೀಡಲಾಗುವುದು ಅಲ್ಲದೆ ಗಂಗೊಳ್ಳಿಯಿಂದ ಇಬ್ಬರು ಆಟಗಾರರನ್ನು ಜಿಲ್ಲಾ ಅಸೋಸಿಯೇಶನ್‌ಗೆ ನೀಡುವಂತೆ ಅವರು ಹೇಳಿದರು. ಇದೇ ಸಂದರ್ಭ ಸಂಘದ ವತಿಯಿಂದ ರಘುಪತಿ ಭಟ್ ಅವರನ್ನು ಅಭಿನಂದಿಸಲಾಯಿತು. 

ಮಾಜಿ ಮಂಡಲ ಪ್ರಧಾನ ಬಿ. ಸದಾನಂದ ಶೆಣೈ, ಮಾಜಿ ಅಧ್ಯಕ್ಷ ಬಿ.ರಾಘವೇಂದ್ರ ಪೈ, ಸಂಘದ ಅಧ್ಯಕ್ಷ ಎಂ.ಜಿ.ರಾಘವೇಂದ್ರ ಭಂಡಾರ್‌ಕಾರ್, ಕಾರ್ಯದರ್ಶಿ ರಾಮನಾಥ ಚಿತ್ತಾಲ್, ಕೆ.ರಾಮನಾಥ ನಾಯಕ್, ಎನ್.ಅಶ್ವಿನ್ ನಾಯಕ್, ಎಂ.ನಾಗೇಶ್ ಪೈ, ಎಂ.ಅನಂತ ಪೈ, ಜಿ.ರೋಹಿದಾಸ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com