ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿಸುವ ಜವಾಬ್ದಾರಿ ಶಿಕ್ಷಕರದ್ದು: ರಾಜು ಪೂಜಾರಿ

ಬೈಂದೂರು: ಮಕ್ಕಳ ಶಿಕ್ಷಣಕ್ಕಾಗಿ ಸರಕಾರ ಹತ್ತಾರು ಯೋಜನೆಗಳು ಜಾರಿಗೆ ತಂದಿದ್ದು ಅದರ ಸಮರ್ಪಕ ಬಳಕೆಯಾದಾಗ ಮಾತ್ರ ಆ ಮಗುವಿನ ಶಿಕ್ಷಣದ ಅಗತ್ಯವನ್ನು ಪೂರೈಸಿದಂತಾಗುತ್ತದೆ ಎಂದು ತಾ.ಪಂ ಸದಸ್ಯ ಹಾಗೂ ಬೈಂದೂರು ಸರಕಾರಿ ಮಾದರಿ ಶಾಲೆಯ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು.

ಅವರು ಅಗಸ್ಟ್ 25ರಂದು ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ೮ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದರು.

ಮಾನವ ಸಂಪನ್ಮೂಲಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂಬ ಸತ್ಯವನ್ನು ಅರಿತು ಶಿಕ್ಷಕರೂ ಮಕ್ಕಳನ್ನು ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಸದಾ ಶ್ರಮವಹಿಸಬೇಕು, ಸರಕಾರಿ ಶಾಲೆಗಳು ಉತ್ತಮ ಶಿಕ್ಷಣಕ್ಕೆ ಬುನಾದಿಯಾಗಬೇಕು ಎಂದವರು ಆಶಿಸಿದರು.

ಶಾಲೆಯ ಪದವೀಧರ ಮುಖ್ಯೋಪಧ್ಯಾಯ ಜನಾರ್ಧನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿಯ ಅಧ್ಯಕ್ಷೆ ಗೌರಿ ದೇವಾಡಿಗ ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬೈಂದೂರು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ದಿನಕರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

8ನೇ ತರಗತಿಯ 31 ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಸದಸ್ಯರುಗಳು, ಹಳೆ ವಿದ್ಯಾರ್ಥಿಗಳಾದ ಮಣಿಕಂಠ ದೇವಾಡಿಗ, ಮಹೇಶ ಈ ಸಂದರ್ಭದಲ್ಲಿ ಹಾಜರಿದ್ದರು. ಶಿಕ್ಷಕ ತಿಮ್ಮಪ್ಪ ಕಾರ್ಯಕ್ರಮದ ನಿರೂಪಿಸಿ, ಗಣಪತಿ ಹೋಬಳಿದಾರ್ ಧನ್ಯವಾದಗೈದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com