ಗುಜ್ಜಾಡಿಯಲ್ಲಿ ಉಚಿತ ಸೈಕಲ್ ವಿತರಣೆ

ಗಂಗೊಳ್ಳಿ: ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ದೃಷ್ಟಿಯಿಂದ ಸರಕಾರ ಮಕ್ಕಳಿಗೆ ಉಚಿತವಾಗಿ ಸೈಕಲ್ ವಿತರಿಸುವ ಯೋಜನೆಯನ್ನು ಹಾಕಿಕೊಂಡು ಪ್ರತಿವರ್ಷ ನಿಗದಿತ ವೇಳೆಗೆ ಮಕ್ಕಳಿಗೆ ಸೈಕಲ್ ವಿತರಣೆ ಮಾಡುತ್ತಿದೆ. ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಂಡು ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಬೇಕು ಎಂದು ಜಿಪಂ ಸದಸ್ಯ ಅನಂತ ಮೊವಾಡಿ ಹೇಳಿದರು.

ಅವರು ಇತ್ತೀಚಿಗೆ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಉಚಿತವಾಗಿ ಸೈಕಲ್ ವಿತರಿಸಿ ಮಾತನಾಡಿದರು.

ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್ ಮೇಸ್ತ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಮನಾಥ ಚಿತ್ತಾಲ್, ಉಪಾಧ್ಯಕ್ಷೆ ಇಂದಿರಾ, ಎಸ್‌ಡಿಎಂಸಿ ಸದಸ್ಯರಾದ ಶೇಖರ ಪೂಜಾರಿ, ಉದ್ಯಮಿ ಗಜೇಂದ್ರ, ನಿವೃತ್ತ ಮುಖ್ಯೋಪಾಧ್ಯಾಯ ನಾಗರಾಜ ಕೊಡಂಚ, ಶಾಲಾ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

ಶಾಲೆಯ ಮುಖ್ಯೋಪಾಧ್ಯಾಯ ಹನುಮಂತ ಬಿಲ್ಲವ ಸ್ವಾಗತಿಸಿ, ಸಹಶಿಕ್ಷಕ ಜಯರಾಮ ಶೆಟ್ಟಿ ವಂದಿಸಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com