ಮರಳುಗಾರಿಕೆಗೆ ನಿಯಂತ್ರಣ ಬೇಕು: ಪ್ರತಾಪ್‌ಚಂದ್ರ ಶೆಟ್ಟಿ

ಕುಂದಾಪುರ: ತಾಲೂಕಿನಲ್ಲಿ ಮರಳುಗಾರಿಕೆ ಎಗ್ಗಿಲ್ಲದೇ ಸಾಗುತ್ತಿದ್ದು, ಗಣಿಗಾರಿಕೆ ನಡೆಸುವವರು ಕಾನೂನಿಗೂ ಬೆಲೆ ಕೊಡುತ್ತಿಲ್ಲ. ಬೇರೆ ಜಿಲ್ಲೆಗಳಿಗೆ ಮರಳು ಸಾಗಾಟ ಮಾಡುವುದರಿಂದ ಜಿಲ್ಲೆಯವರಿಗೆ ಮರಳು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ರೀಮಂತರಿಗೆ ಸುಲಭವಾಗಿ ಸಿಗುತ್ತಿರುವ ಮರಳು ಬಡವರಿಗೆ ಅಲಭ್ಯವಾಗಿದೆ ಎಂದು  ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪ್‌ಚಂದ್ರ ಶೆಟ್ಟಿ ಹೇಳಿದರು.

ಅವರು ಕುಂದಾಪುರ ಆರ್‌.ಎನ್‌. ಶೆಟ್ಟಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರೈತ ಸಂಘ ಸಭೆಯಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದರು.

ಮರಳು ಗಣಿಗಾರಿಕೆಯ ನಿಬಂಧನೆಗಳನ್ನು ಉಲ್ಲಂಘಿಸಲಾಗುತ್ತಿದೆ. ಮರಳು ಬೆಲೆ ಇಳಿಸಬೇಕು. ಹೊರ ಜಿಲ್ಲೆಗಳಿಗೆ ಹೋಗುವ ಮರಳನ್ನು ತಡೆಯಬೇಕು. ಏಕರೂಪದ ಮರಳು ನೀತಿಯನ್ನು ಜಾರಿಗೆ ತರಬೇಕು ಮರಳುಗಾರಿಕೆ ನಡೆಸುವ ದೋಣಿ ಮತ್ತು ಕಾರ್ಮಿಕರ ಸಂಖ್ಯೆ ಇಳಿಸಬೇಕು ಎಂದು ಒತ್ತಾಯಿಸಲಾಯಿತು.

ಸಿಆರ್‌ಝಡ್‌ ಮರಳುಗಾರಿಕೆಗೆ ವಿಶೇಷ ನೀತಿ ರೂಪಿಸಬೇಕು. ಮರಳು ಗಣಿಗಾರಿಕೆ ಕಾನೂನು ಚೌಕಟ್ಟಿನಡಿಯಲ್ಲೇ ನಡೆಯಬೇಕು. ಉಲ್ಲಂಘನೆ ಮಾಡಿದವರ ವಿರುದ್ಧ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಮರಳು ಗಣಿಗಾರಿಕೆ ಸಮಸ್ಯೆ ಪರಿಹಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಧಿಗಳು ತೆರಳಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಉಸ್ತುವಾರಿ ಸಚಿವರಿಗೆ ಮರಳು ಗಣಿಗಾರಿಕೆಯ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದು, ಕರಾವಳಿ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಮಾಡುವಂತೆ ಸರಕಾರದ ಮೇಲೆ ಒತ್ತಡ ಹಾಕುವಂತೆ ಮಾಡಬೇಕಿದೆ ಎಂದು  ಹೇಳಿದರು.

ಕುಂದಾಪುರ ತಾ.ಪಂ. ಅಧ್ಯಕ್ಷ ಭಾಸ್ಕರ ಬಿಲ್ಲವ, ಕುಂದಾಪುರ ತಾ.ಪಂ. ಸದಸ್ಯರಾದ ಹರ್ಕೂರು ಮಂಜಯ್ಯ ಶೆಟ್ಟಿ, ರಾಜು ಪೂಜಾರಿ, ವಂಡ್ಸೆ ಗ್ರಾ.ಪಂ. ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ, ಸಂಪಿಗೇಡಿ ಸಂಜೀವ ಶೆಟ್ಟಿ, ಮಾಜಿ ಜಿ.ಪಂ. ಸದಸ್ಯ ದೇವಾನಂದ ಶೆಟ್ಟಿ, ಮಲ್ಯಾಡಿ ಶಿವರಾಮ ಶೆಟ್ಟಿ, ಕಟ್‌ಬೇಲೂ¤ರು ಗ್ರಾ.ಪಂ. ಉಪಾಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ, ಹಾಲಾಡಿ ಗ್ರಾ.ಪಂ. ಅಧ್ಯಕ್ಷ ಸರ್ವೋತ್ತಮ ಹೆಗ್ಡೆ, ಆನಗಳ್ಳಿ ಗ್ರಾ.ಪಂ. ಸದಸ್ಯ ಗಂಗಾಧರ ಶೆಟ್ಟಿ, ವಿಕಾಸ್‌ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ- editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com