ಮೂಲಭೂತ ಸೌಕರ್ಯ ಆಗ್ರಹಿಸಿ ಎಸ್.ಡಿ.ಪಿ.ಐ. ಪ್ರತಿಭಟನೆ

ಬೈಂದೂರು: ಶಿರೂರಿನ ವಿವಿಧ ವಾರ್ಡ್‌ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಆಗ್ರಹಿಸಿ ಎಸ್.ಡಿ.ಪಿ.ಐ ಸಂಘಟನೆ ಶಿರೂರು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.ಈ ಸಂಧರ್ಭದಲ್ಲಿ ಮಾತನಾಡಿದ ಎಸ್.ಡಿ.ಪಿ.ಐ ಅಧ್ಯಕ್ಷ ಅನ್ವರ್ ಶಿರೂರಿನ ಹಡವಿನಕೋಣೆ,ಕೋಣಮಕ್ಕಿ, ಸೇರಿದಂತೆ ವಿವಿಧ ಭಾಗಗಳಲ್ಲಿ ರಸ್ತೆಗಳು ಸಂಚಾರಕ್ಕೆ ದುಸ್ಸರವಾಗಿದೆ.ಬೀದಿ ದೀಪ ಹಾಗೂ ಚರಂಡಿ ಅವ್ಯವಸ್ಥೆಯಿಂದ ಸಾರ್ವಜನಿಕರು ಪರಿತಪಿಸುವಂತಾಗಿದೆ ಹೀಗಾಗಿ ಗ್ರಾಮ ಪಂಚಾಯತ್ ಸಮರ್ಪಕವಾಗಿ ಸಂದಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದರು.

ಗ್ರಾ.ಪಂ ಉಪಾಧ್ಯಕ್ಷ ನಾಗೇಶ ಮೊಗೇರ ಮನವಿ ಸ್ವೀಕರಿಸಿದರು ಬಳಿಕ ಮಾತನಾಡಿ ಈಗಾಗಲೇ ಶಿರೂರಿನ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ವರದಿ ಸಿದ್ದಪಡಿಸಿಕೊಂಡಿದೆ. ಹೀಗಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಬೇಡಿಕೆಗಳಿಗೆ ಸಮರ್ಪಕವಾಗಿ ಸಂದಿಸುತ್ತಿದ್ದೇವೆ. ಎಂದರು.ಈ ಸಂಧರ್ಭದಲ್ಲಿ  ಶಿರೂರು ಘಟಕದ ಅಧ್ಯಕ್ಷ ಫಯಾಜ್, ಅಕ್ಬರ್ ಆದಮ್, ಮುಜಾಮಿಲ್, ಜಿಪ್ರಿ, ರಹೀಮಾ ಮುಂತಾದವರು ಹಾಜರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com